ಅ.3 ರಂದು ಸುಳ್ಯದಲ್ಲಿಡಾ.ಡಿ.ವೀರೇಂದ್ರ ಹೆಗಡೆಯವರ ಸಮಕ್ಷಮದಲ್ಲಿ ಗಾಂಧಿ ಸ್ಮೃತಿ ಹಾಗೂ ಜನಜಾಗೃತಿ ವೇದಿಕೆಯ ಬೃಹತ್ ಸಮಾವೇಶ

0

ಜಿಲ್ಲಾ ಜನಜಾಗೃತಿ ವೇದಿಕೆ‌ ಪದಾಧಿಕಾರಿಗಳ ಪೂರ್ವ ಭಾವಿ ಸಭೆಯಲ್ಲಿ ಮಹತ್ವದ ನಿರ್ಧಾರ

ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ಜಿಲ್ಲಾ ಜನಜಾಗೃತಿ ವೇದಿಕೆಯಪದಾಧಿಕಾರಿಗಳ ಪೂರ್ವ ಭಾವಿ ಸಭೆಯು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಇಂದು (ಸೆ. 13 ) ನಡೆಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ವರ್ಷಂಪ್ರತಿ ಹಮ್ಮಿಕೊಳ್ಳುವ ಗಾಂಧಿ ಸ್ಮೃತಿ ಕಾರ್ಯಕ್ರಮ ಹಾಗೂ ಜನಜಾಗೃತಿ ವೇದಿಕೆಯಸಮಾವೇಶವನ್ನು ಈ ಬಾರಿ ಸುಳ್ಯದಲ್ಲಿ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.
ಅ.3 ರಂದು ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಕಾರ್ಯಕ್ರಮ ನಡೆಸುವ ಬಗ್ಗೆ ಒಮ್ಮತದಿಂದ ತೀರ್ಮಾನಿಸಲಾಯಿತು.
ವಿಶೇಷವಾಗಿ ಸುಳ್ಯದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಭೂತಪೂರ್ವ ಸಮಾವೇಶದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ .ವೀರೇಂದ್ರ ಹೆಗಡೆಯವರು ಆಗಮಿಸಿ ಆಶೀರ್ವಚನ ನೀಡಲಿರುವುದಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ರವರು ಅಧಿಕೃತವಾಗಿ ಘೋಷಿಸಿದರು.

ಗಾಂಧಿ ಸ್ಮೃತಿ ಕಾರ್ಯಕ್ರಮ ಹಾಗೂ ಜನಜಾಗೃತಿ ವೇದಿಕೆಯ ಜಾಥಾ ಹಾಗೂ ಬೃಹತ್ ಸಮಾವೇಶ ಮತ್ತು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಜಂಟಿಯಾಗಿ ನಡೆಯಲಿದ್ದು ಸುಳ್ಯ, ಪುತ್ತೂರು, ಕಡಬ, ಕಾಸರಗೋಡು ಮಂಜೇಶ್ವರ ಭಾಗದ ಜನಜಾಗೃತಿ ವೇದಿಕೆಯ ಸದಸ್ಯರು ನವಜೀವನ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು ಅಚ್ಚು ಕಟ್ಟಾದ ವ್ಯವಸ್ಥೆ ನಿರ್ವಹಣೆಯ ಕುರಿತು ವಿಚಾರ ವಿಮರ್ಶೆಯನ್ನು ಸದಸ್ಯರ ಅಭಿಪ್ರಾಯದ ಮೇರೆಗೆಚರ್ಚಿಸಲಾಯಿತು.

ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಫಾಯಸ್ ವಿವರ ಮಂಡಿಸಿದರು.

ಈ ಸಂದರ್ಭದಲ್ಲಿ ಸಮಾವೇಶದ ಕುರಿತು ವಿವಿಧ ಸಮಿತಿಯನ್ನು ರಚಿಸಿ ಜವಾಬ್ದಾರಿಗಳನ್ನು ಹಂಚಿಕೊಡಲಾಯಿತು.

ಸುಳ್ಯದ ಜ್ಯೋತಿ ವೃತ್ತದಿಂದ ಬೆಳಗ್ಗೆ ಸಮಾವೇಶದ ಜಾಥಾ ಪ್ರಾರಂಭಗೊಂಡು ಸುಳ್ಯದ ಮುಖ್ಯ ರಸ್ತೆಯ ಮೂಲಕ ಸಾಗಿ ಬಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಸಮಾವೇಶ ನಡೆಯಲಿರುವುದು.
ಸಮಾವೇಶದಲ್ಲಿ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದಾರೆ.
ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಿಸುವ ಕಾರ್ಯಕ್ರಮ ನಡೆಯಲಿರುವುದಾಗಿ ಅಧ್ಯಕ್ಷರು ತಿಳಿಸಿದರು.

ಸುಳ್ಯ ‌ತಾಲೂಕಿನ ಅಡಿಕೆ ಬೆಳೆಗಾರರ ಸಮಸ್ಯೆ ಹಳದಿ ರೋಗದ ಕುರಿತು ಮನವಿ ಪತ್ರವನ್ನು ‌ಪೂಜ್ಯರಿಗೆ ನೀಡುವುದಾಗಿ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರ್ ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಜ್ಞಾನವಿಕಾಸ ಯೋಜನೆಯ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಪಿ.ಸಿ ಜಯರಾಮ ಮಡಪ್ಪಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ ಅಮೆಚೂರು, ಪ್ರಗತಿ ಬಂಧು ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ, ತಾಲೂಕು ಭಜನಾ ‌ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವಣೂರು, ಪುತ್ತೂರು ಕೇಂದ್ರ ಸಮಿತಿ ಅಧ್ಯಕ್ಷ ಉದಯಕುಮಾರ್ ಜಿ.ಕೆ, ವಿಟ್ಲ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ, ಕಡಬ ಕೇಂದ್ರ ಒಕ್ಕೂಟದ ಅಧ್ಯಕ್ಷ ಸಂತೋಷ್ ಕೇ, ವಿಟ್ಲ ಜನ ಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಜೆ, ಪುತ್ತೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕೇಶ್ ಹೆಗ್ಡೆ, ಪುತ್ತೂರು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಜಿ. ಮಹಾಬಲ ರೈ ಒಳತಡ್ಕ, ಸುಳ್ಯ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ವಿಶ್ವನಾಥ ರೈ ಕಳಂಜ, ಸುಳ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಾಸ್ಟರ್ ಜಯರಾಮ ಪಿ.ಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಶ್ಮಿ ಪ್ರಾರ್ಥಿಸಿದರು. ಯೋಜನಾಧಿಕಾರಿ ನಾಗೇಶ್ ಪಿ ಸ್ವಾಗತಿಸಿದರು. ಜಿಲ್ಲಾ
ನಿರ್ದೇಶಕ ಪ್ರವೀಣ್ ಕುಮಾರ್ ವಂದಿಸಿದರು. ಮೇಲ್ವಿಚಾರಕ ಬಾಲಕೃಷ್ಣ ಮತ್ತು ವಿಶಾಲ ಕಾರ್ಯಕ್ರಮ ನಿರೂಪಿಸಿದರು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷರುಗಳು,ಪೂರ್ವಾಧ್ಯಕ್ಷರುಗಳು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು,
ಭಜನಾ ಪರಿಷತ್ ಪದಾಧಿಕಾರಿಗಳು, ಯೋಜನೆಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.