ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ರಶ್ಮಿ ಎಸ್ ಎನ್. ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ

0

ಮಂಗಳೂರಿನ ಆಕ್ಸಿಸ್ ಬ್ಯಾಂಕ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಲ್ಲಿ ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ರಶ್ಮಿ ಎಸ್ ಎನ್ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರ ಶಿಕ್ಷಣ ಹಾಗೂ ಕಲಾ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು. ಆಕ್ಸಿಸ್ ಬ್ಯಾಂಕ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಇದರ ಮುಖ್ಯಸ್ಥರಾಗಿರುವ ಸತೀಶ್ ಮೆನನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮ ದಲ್ಲಿ ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಹಲವು ಸಾಧಕರು ಭಾಗವಹಿಸಿದ್ದರು.