ಜಯನಗರ: ಸರ್ಕಾರಿ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ

0

ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನ ಪೀಠಿಕೆ ಓದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿದ್ದು ಈ ಹಿನ್ನೆಲೆಯಲ್ಲಿ ಇಂದು ಜಯನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆಯಿತು.


ಶಾಲಾ ಉಪಮುಖ್ಯಮಂತ್ರಿ ಅಜಯ್ ಕುಮಾರ್ ಪೀಠಿಕೆಯನ್ನು ವಾಚಿಸಿದರು.ಶಾಲಾ ಮುಖ್ಯ ಶಿಕ್ಷಕಿ ವೀಣಾ ಕೆ,ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸಂವಿಧಾನ ಪೀಠಿಕೆ ಓದು ಪರಿಪಾಠವನ್ನು ಸೆ.15ರಿಂದ ಆರಂಭಿಸುವುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿತ್ತು.


ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವ ಸಂವಿಧಾನ ಪೀಠಿಕೆ ಅದರ ಆತ್ಮವಾಗಿದೆ. ಹೀಗಾಗಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆಯ ಕೇಂದ್ರದಿಂದ ಸಂವಿಧಾನ ಪೀಠಿಕೆಯನ್ನು ಖರೀದಿಸಿ ಕಾಲೇಜಿನಲ್ಲಿ ಫಲಕ ಪ್ರಕಟಿಸಬೇಕು ಎಂದು ಹೇಳಿತ್ತು.