ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಕೇರಳ ರಾಜ್ಯದಿಂದ ಬರುವ ವಾಹನ ಪ್ರಯಾಣಿಕರ ತಪಾಸಣೆ
ಕೇರಳ ರಾಜ್ಯದ ಹಲವೆಡೆಗಳಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಕೇರಳ ರಾಜ್ಯದಿಂದ ಬರುವ ವಾಹನಗಳು ನಿಲ್ಲಿಸಿ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ.















ಕೇರಳ ರಾಜ್ಯದ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಮನೆಭೇಟಿ, ಸಮಯದಲ್ಲಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಐ.ಇ.ಸಿ/ ಎಸ್.ಬಿ.ಸಿ.ಸಿ. ಕಾರ್ಯಚಟುವಟಿಕೆಗಳನ್ನು ನಡೆಸಿ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡುವುದು ಹಾಗೂ ಸಂಶಯಾಸ್ಪದ ಪ್ರಕರಣಗಳು ಕಂಡುಬಂದರೆ ಜಿಲ್ಲಾ ಮಟ್ಟಕ್ಕೆ ವರದಿ ನೀಡುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರಿಗೆ ನಿಫಾ ವೈರಸ್ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಗ್ರಾಮ ಪಂಚಾಯತಿ, ಪುರಸಭೆ, ಆಶಾ ಕಾರ್ಯಕರ್ತೆಯರ ಸಭೆ, ಶಾಲಾ -ಕಾಲೇಜುಗಳ , ಸಮುದಾಯ ಸಭೆಗಳು, ಸಂಘಸಂಸ್ಥೆಗಳು ಜಾಗೃತಿ ಸಭೆಯನ್ನು ನಡೆಸುವಂತೆ ತಿಳಿಸಲಾಗಿದೆ.









