ದ್ವಿಚಕ್ರ ವಾಹನ ಕಳ್ಳತನದ ಆರೋಪಿಯ ಬಂಧನ

0

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೋಟರ್ ಸೈಕಲ್ ಕಳ್ಳತನದ ಆರೋಪಿಯನ್ನು ಬಂಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಗ್ರಾಮದ ಸುಬ್ರಹ್ಮಣಿ ೨೬ ವರ್ಷ ಎಂಬಾತನಾಗಿದ್ದು ಈತನ ಮೇಲೆ ದ್ವಿಚಕ್ರವಾಹನ ಕಳ್ಳತನದ ಪ್ರಕರಣ ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.


ಸೆಪ್ಟಂಬರ್ ೧೬ರಂದು ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಸುಳ್ಯ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುವ ಸಮಯ ಈತ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.

ಠಾಣಾ ಪಿಎಸ್‌ಐ ಈರಯ್ಯ ಮತ್ತು ಸಿಬ್ಬಂದಿಗಳು ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈತ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎನ್ನಲಾಗಿದ್ದು
ಕೆಲ ದಿನಗಳ ಹಿಂದೆ ಸುಳ್ಯ ಪೇಟೆಯಲ್ಲಿ ಬಿದ್ದು ಸಿಕ್ಕಿದ್ದ. ಕಳೆದ ಕೆಲವು ತಿಂಗಳುಗಳಿಂದ ಸುಳ್ಯ ಪರಿಸರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಸುಳ್ಯ ಪೊಲೀಸರು ಸುಳ್ಯದ ಗಡಿಪ್ರದೇಶ ಮತ್ತು ನಗರ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿ ಸಂಶಯಾಸ್ಪದ ವಾಹನಗಳ ಬಿಗು ತಪಾಸಣೆ ಮಾಡುತ್ತಿದ್ದಾರೆ. ಇದೇ ರೀತಿಯ ತಪಾಸಣೆ ನಡೆಸುವ ಸಂದರ್ಭ ಈ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಚಿನ್ನದ ಸರವನ್ನು ಕೊಂಡೋಗಿದ್ದ ಪ್ರಕರಣವು ಈತನ ಮೇಲೆ ಇತ್ತು ಎಂದು ತಿಳಿದುಬಂದಿದೆ.