ಕಾಯರ್ತೋಡಿ: ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ – ಸತ್ಯನಾರಾಯಣ ಪೂಜೆ

0

ಸಾವಿರಾರು ಮಂದಿ ಭಕ್ತಾದಿಗಳು ಭಾಗಿ

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಶನಿವಾರದ ಪ್ರಯುಕ್ತ ಬಲಿವಾಡು ಕೂಟವು ನಡೆಯಿತು. ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿ, ಶ್ರೀ ದೇವರ ಅನ್ನಪ್ರಸಾದ ಸ್ವೀಕರಿಸಿದರು.


ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ನೀಲಕಂಠ ಭಟ್ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಮಧ್ಯಾಹ್ನ ಶ್ರೀ ಮಹಾವಿಷ್ಣು ದೇವರಿಗೆ ವಿಶೇಷ ಮಹಾಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್ ಸೇರಿದಂತೆ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.