ಶ್ರೀ ಕೃಷ್ಣನು ನೀಡಿದ ಸಾತ್ವಿಕ ಸಂದೇಶ ಜೀವನಕ್ಕೆ ಪ್ರೇರಣೆಯಾಗುವುದು:ಸೂರ್ಯನಾರಾಯಣ ಭಟ್ ಕಶೆಕೋಡಿ

0


ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

ಜಗತ್ತಿಗೆ ಬೆಳಕನ್ನು ನೀಡಿದ ದೇಶ ಭಾರತ. ಭಾರತ ದೇವಲೋಕಕ್ಕೆ ಸಮಾನವಾದ ಪುಣ್ಯ ಭೂಮಿ. ದೇವತೆಗಳು ಹುಟ್ಟಿ ಬರಲು ಬಯಸುವ ಭೂಮಿ.ಆಯಾ ಕಾಲದಲ್ಲಿ ಹೇಗೆ ಬದುಕಬೇಕು ಎಂದು ಭಗವಂತನು ಮನುಷ್ಯನಾಗಿ ಹುಟ್ಟಿ ಬಂದು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಆ ರೀತಿ ಬದುಕುವುದು ನಮ್ಮ ಧರ್ಮ. ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯ ಮೂಲಕ ನೀಡಿದ ಸಂದೇಶ ನಮ್ಮ ಜೀವನಕ್ಕೆ ಪ್ರೇರಣೆಯಾಗಬೇಕು ಎಂದು
ಎಂದು ಖ್ಯಾತ ವಾಗ್ಮಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸತ್ಸಂಗ ಪ್ರಮುಖ್ ಸೂರ್ಯನಾರಾಯಣ ಭಟ್ ಕಶೆಕೋಡಿ ಹೇಳಿದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ
ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ 10ನೇ ವರುಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀಕೃಷ್ಣನು ತನ್ನ ಜೀವನದ‌ ಮೂಲಕ ತೋರಿಸಿದ ಸಾತ್ವಿಕ ಸಂದೇಶಗಳನ್ನು ನೀಡಿದ್ದಾರೆ.


ಎಲ್ಲಾ ಶಾಸ್ತ್ರಗಳ ಸಾರ ಮಹಾಭಾರತ, ಮಹಾಭಾರತದ ಸಾರ ಭಗವದ್ಗೀತೆ ಎಂದ ಅವರು ಪ್ರಕೃತಿಯೇ ದೇವರು ಎಂಬ ಸಂದೇಶ ನೀಡಿದ ಶ್ರೀಕೃಷ್ಣ ಇಂದ್ರಿಯಗಳನ್ನು ನಿಯಂತ್ರಣದಲ್ಲಿಡುವ ನೀತಿ ಪಾಠವನ್ನು ತಿಳಿಸಿದ್ದಾರೆ ಎಂದು ಹೇಳಿದರು. 60 ವರ್ಷದಲ್ಲಿ ಜಗತ್ತು ಮೆಚ್ಚುವ ಸಾಧನೆಯನ್ನು ವಿಶ್ವ ಹಿಂದೂ ಪರಿಷತ್ ಮಾಡಿದೆ ಎಂದು ಅವರು ಹೇಳಿದರು.


ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದಲ್ಲಿ ನಡೆದ ಧಾರ್ಮಿಕ ಸಭೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸ್ವದೇಶಿ ಗೋ ಸಂರಕ್ಷಕ ಕೆ. ವಿಶ್ವನಾಥ ಪೈ ಐವರ್ನಾಡು, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ, ಬಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್‌ಡೇಲು ಉಪಸ್ಥಿತರಿದ್ದರು.
ಸ್ವದೇಶಿ ಗೋಸಂರಕ್ಷಕ ಕೆ. ವಿಶ್ವನಾಥ ಪೈ ಐವರ್ನಾಡು ಅವರನ್ನು ಸನ್ಮಾನಿಸಲಾಯಿತು. ಮೊಸರು ಕುಡಿಕೆ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷರನ್ನು ಹಾಗೂ ಪ್ರಸ್ತುತ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.


ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ, ಮೊಸರು ಕುಡಿಕೆ ಉತ್ಸವ ಸಮಿತಿ ಉಪಾಧ್ಯಕ್ಷರಾದ ಪ್ರಕಾಶ್ ಯಾದವ್,ರಜತ್ ಅಡ್ಕಾರ್, ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ, ಕಾರ್ಯದರ್ಶಿ ಸಂದೀಪ್ ವಳಲಂಬೆ, ಕೋಶಾಧಿಕಾರಿ ನವೀನ್ ಎಲಿಮಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅಭಿಜ್ಞಾ ಭಟ್ ಪ್ರಾರ್ಥಿಸಿದರು.
ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ ಸ್ವಾಗತಿಸಿ, ಮೊಸರು ಕುಡಿಕೆ ಉತ್ಸವ ಸಮಿತಿ ಕಾರ್ಯದರ್ಶಿ ಸಂದೀಪ್ ವಳಲಂಬೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ್ ಯಾದವ್ ಸನ್ಮಾನಿತರ ಪರಿಚಯ ಮಾಡಿದರು. ಕಾರ್ಯದರ್ಶಿ ನವೀನ್ ಎಲಿಮಲೆ ವಂದಿಸಿದರು. ಉಪನ್ಯಾಸಕಿ ಕು. ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here