ಬಾಳಿಲದಲ್ಲಿ ನಾಡಹಬ್ಬ ಗಣೇಶೋತ್ಸವ

0

ನಾಗರಿಕ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಆಶ್ರಯದಲ್ಲಿ 40ನೇ ವರ್ಷದ ನಾಡಹಬ್ಬ ಗಣೇಶೋತ್ಸವ 2023 ಸೆ. 19ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ ಗಣಪತಿ ಪ್ರತಿಷ್ಠೆ ಬಳಿಕ ಪೂಜಾ ಕಾರ್ಯಗಳು ಆರಂಭಗೊಂಡಿತು. ಮಧ್ಯಾಹ್ನ 1.00 ಗಂಟೆಗೆ ಮಹಾ ಮಂಗಳಾರತಿ ಪ್ರಸಾದ ಭೋಜನ ನಡೆಯಲಿದೆ. ಬೆಳಿಗ್ಗೆಯಿಂದ ಮಕ್ಕಳಿಗೆ ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತಿದೆ. ಮಧ್ಯಾಹ್ನ ಸಮಿತಿಯ ಅಧ್ಯಕ್ಷ ತಿಲಕ್ ತಂಟೆಪಾಡಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಮೂರು ಮಂದಿಗೆ ಸನ್ಮಾನ ಮತ್ತು 11 ಮಂದಿಗೆ ಗೌರವಾರ್ಥನೆ ನಡೆಯಲಿದೆ. ರಾತ್ರಿ 8.00 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಬಾಳಿಲದಿಂದ ಬೊಮ್ಮಣಮಜಲಿಗೆ ಶೋಭಾಯಾತ್ರೆ ನಡೆದು ಮೂರ್ತಿ ವಿಸರ್ಜನೆ ನಡೆಯಲಿದೆ.
ಬೆಳಿಗ್ಗೆ ಗೀತಜ್ಞಾನ ಯಜ್ಞ ಘಟಕ ಬಾಳಿಲ ಇವರಿಂದ ಭಗವದ್ಗೀತೆ ಪಾರಾಯಣ, ಬಳಿಕ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಬಾಳಿಲ – ಮುಪ್ಪೇರ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ‌ 6.30 ರಿಂದ ಡಾನ್ಸ್ & ಬೀಟ್ಸ್ ನೃತ್ಯ ಕಲಾಕೇಂದ್ರ ಬೆಳ್ಳಾರೆ ಹಾಗೂ ಇತರ ಶಾಖೆಗಳ ಮಕ್ಕಳಿಂದ ನೃತ್ಯ ಸಂಭ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here