ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

0

ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಕೊಡಮಾಡುವ 2022-23ನೇ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆಯಾಗಿದೆ.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾದ ಕೊಡಂದೇರ ಗಣಪತಿಯವರು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಬಿ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೆಚ್.ಕೆ. ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.