ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ

0

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ಶಾರದ ಮಹಿಳಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ವಹಿಸಿದರು.

ಉದ್ಘಾಟನೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶ್ರೀಮತಿ ರೇವತಿ ನಂದನ್ ರವರು ನೆರವೇರಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ. ರವರು ಸ್ವಾಗತಿಸಿ, ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀ ಬಾಲಕೃಷ್ಣ. ಕೆ. ರವರು ವಂದಿಸಿದರು. ವೇದಿಕೆಯಲ್ಲಿ ತಾಲೂಕು ಕ್ರೀಡಾ ಸಂಯೋಜಕರಾದ ಶ್ರೀಮತಿ ಶಾಂತಿ ಮತ್ತು ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ. ಪಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಬಾಲಚಂದ್ರ. ಕೆ ಪಂದ್ಯಾಟವನ್ನು ಸಂಘಟಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ. ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.