ನಾಲ್ಕೂರು : ಬೃಹತ್ ಸ್ವಚ್ಛತಾ ಕಾರ್ಯಕ್ರಮ

0


ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದಲ್ಲಿ ಹಾದುಹೋಗುವ ಹೆದ್ದಾರಿಯ ಇಕ್ಕೆಲಗಳಲ್ಲಿ ಇದ್ದ ಕಸ ಕಡ್ಡಿ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರಿಕರು, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಗುತ್ತಿಗಾರು ಗ್ರಾಮ ಪಂಚಾಯತ್ ಸಂಪೂರ್ಣ ಸಹಕಾರ ನೀಡಿತ್ತು. ಅಧಿಕ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. (ವರದಿ: ಡಿ.ಹೆಚ್.)