














ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆಯ ಸಲುವಾಗಿ ಪಕ್ಷದ ನಾಯಕರ, ಕಾರ್ಯಕರ್ತರ ಸಭೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಶ್ರೀಮತಿ ಮಮತಾ ಗಟ್ಟಿಯವರ ಉಪಸ್ಥಿತಿಯಲ್ಲಿ ಸೆ.26 ರಂದು ಪೂ.11 ಕ್ಕೆ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಜರುಗಿಸುವುದೆಂದು ನಿರ್ಧರಿಸಲಾಗಿತ್ತು. ಇದೀಗ ಸ್ಥಳ ಬದಲಾವಣೆ ಮಾಡಿದ್ದು ಈ ಸಭೆಯು ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಭವನದಲ್ಲಿ ನಡೆಸುವುದೆಂದು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಪಕ್ಷದ ತಾಲೂಕು ವ್ಯಾಪ್ತಿಯ ಹಿರಿಯ ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.









