ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕಬ್ಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದ ಕರ್ನಾಟಕ ಪಬ್ಲಿಕ್ ಸ್ಕೂಲ್ ತಂಡಕ್ಕೆ ಅಭಿನಂದನೆ

0

ಕರ್ನಾಟಕ ಸರಕಾರ ಗ್ರಾಮ ಪಂಚಾಯತ್ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಮತ್ತು ಸ್ನೇಹಿತರ ಕಲಾ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ಜರುಗಿದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢಶಾಲಾ ವಿಭಾಗದ ಕಬ್ಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನದೊಂದಿಗೆ ವಿಜೇತರಾದ ತಂಡವನ್ನು ಮತ್ತು ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಗಳನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಪಿ.ಎಲ್ ರೈ ಅಭಿನಂದಿಸಿದರು.

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ್ ಉಲ್ಲಾಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬೆಳ್ಳಾರೆ ಜೇಸಿ ಪೂರ್ವಾಧ್ಯಕ್ಷ ಮಹಮ್ಮದ್ ಆರಿಫ್ ಬೆಳ್ಳಾರೆ, ಪ್ರಶಾಂತಿ ಕ್ಲಿನಿಕ್ ವೈದ್ಯರಾದ ಡಾ. ಕಾರ್ತಿಕ್ ಎಸ್, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ, ಧನಲಕ್ಷ್ಮೀ ಶ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಅಧ್ಯಕ್ಷೆ ಶ್ರೀಮತಿ ವೀಣಾ ಗಿರೀಶ್ ಕೊಲ್ಯ,

ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ಬೇಬಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಉಪ ಪ್ರಾಂಶುಪಾಲರಾದ ಶ್ರೀಮತಿ ಉಮಾ ಕುಮಾರಿ
ಉಪಸ್ಥಿತರಿದ್ದು, ಶುಭ ಹಾರೈಸಿದರು.