ಶಿವಪ್ರಸಾದ್ ಆಲೆಟ್ಟಿ ವರ್ಷದ ಭಜಕ ಸಾಧಕ ಪ್ರಶಸ್ತಿಗೆ ಆಯ್ಕೆ

0

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಪ್ರಶಸ್ತಿ ಪ್ರದಾನ

ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ವತಿಯಿಂದ ಕೊಡಮಾಡಲ್ಪಡುವ 2023 ರ ವರ್ಷದ ಭಜಕ ಸಾಧಕ ಪ್ರಶಸ್ತಿಗೆ
ಶಿವಪ್ರಸಾದ್ ಆಲೆಟ್ಟಿ ಯವರು ಆಯ್ಕೆಯಾಗಿರುತ್ತಾರೆ.

ತಾಲೂಕು ಭಜನಾ ಪರಿಷತ್ತಿನ ಸಭೆಯಲ್ಲಿ ತಾಲೂಕಿನ ವಲಯದಲ್ಲಿ ರುವ ಭಜಕ ಸಾಧಕರನ್ನು ಗುರುತಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿತ್ತು. ಕ್ಷೇತ್ರದ ಮಾನದಂಡದ ಪ್ರಕಾರ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಯೋಜನಾಧಿಕಾರಿ ಮೇಲ್ವಿಚಾರಕರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಧರ್ಮಸ್ಥಳದಲ್ಲಿ ನಡೆಯುತ್ತಿರುವ 2023 ರ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿ
ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಸಮ್ಮುಖದಲ್ಲಿ ಅ‌.4 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಡೆಯಲಿದೆ.

ಶಿವಪ್ರಸಾದ್ ಆಲೆಟ್ಟಿ ಯವರು ಕಳೆದ ಹಲವಾರು ವರ್ಷಗಳಿಂದ ಭಜನೆಯಲ್ಲಿ ತೊಡಗಿಸಿಕೊಂಡು ಭಜನಾ ತರಬೇತಿ ತರಗತಿಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.
ತಾಲೂಕಿನ ಹಲವು ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಭಜನಾ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದು ಆಲೆಟ್ಟಿ ಶ್ರೀ ಸದಾಶಿವ ಭಜನಾ ಸಂಘದ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಭಜನಾ ಸಂಘದಅಧ್ಯಕ್ಷರಾಗಿರುತ್ತಾರೆ.
ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಅಧ್ಯಕ್ಷರಾಗಿ ಸತತ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಗೌರವಾಧ್ಯಕ್ಷರಾಗಿದ್ದಾರೆ. ಇವರು ಸುಳ್ಯದ ಸುದ್ದಿ ಪತ್ರಿಕೆಯ ವರದಿಗಾರರಾಗಿರುತ್ತಾರೆ.