ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಗಿರಿದರ್ಶಿನಿ ಪರಿಸರದಲ್ಲಿ ಸ್ವಚ್ಚತಾ ಕಾರ್ಯ

0

ಮರಾಟಿ ಸಮಾಜ ಸೇವಾ ಸಂಘ ಸುಳ್ಯ ತಾಲೂಕು, ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ ಗಿರಿದರ್ಶಿನಿ ಸಭಾಭವನದ ವಠಾರದಲ್ಲಿ ಇಂದು ನಡೆಯಿತು.

ಜೇಸಿಐನ ರಾಷ್ಟ್ರೀಯ ತರಬೇತುದಾರರಾದ ಡಾ.ಟಿ.ಕೃಷ್ಣ ಮೂರ್ತಿ ಉಜಿರೆ ಸ್ವಚ್ಚತಾ ಕಾರ್ಯಕ್ಕೆ ಶುಭ ಹಾರೈಸಿದರು.
ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್, ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕೋಶಾಧಿಕಾರಿ ಜನಾರ್ದನ ನಾಯ್ಕ್ ಕೇರ್ಪಳ, ಸಂಘಟನಾ ಕಾರ್ಯದರ್ಶಿ ಈಶ್ವರ ವಾರಣಾಶಿ,

ಕಾರ್ಯಕಾರಿ ಸಮಿತಿ ಸದಸ್ಯರಾದ ರಘುನಾಥ ಜಟ್ಟಿಪಳ್ಳ, ನಿತ್ಯಾನಂದ ಕುಡೆಂಬಿ,ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜಾ ಎಂ.ವಿ., ಕಾರ್ಯದರ್ಶಿ ಶ್ರೀಮತಿ ಕುಸುಮಾ ಜನಾರ್ದನ ನಾಯ್ಕ್, ಶ್ರೀಮತಿ ಮೀನಾಕ್ಷಿ ಭಸ್ಮಡ್ಕ,,ಶ್ರೀಮತಿ ರಾಜೇಶ್ವರಿ, ಶೋಭಾ ಪಂಜಿಗಾರು, ಯುವ ವೇದಿಕೆಯ ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಉದಯಕುಮಾರ್ ಮಾಣಿಬೆಟ್ಟು ,

ಜತೆ ಕಾರ್ಯದರ್ಶಿ ರಮೇಶ್ ನೀರಬಿದಿರೆ,ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಸಮದಾಯದ ಯುವಕ, ಯುವತಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.