ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

0

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ,ಬೆಳ್ಳಾರೆ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ,ನರೇಗಾ ಯೋಜನೆಯ ವಿಶೇಷ ಗ್ರಾಮ ಸಭೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಅ.02 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ನ ಅಧ್ಯಕ್ಷರಾದ ನಮಿತಾ ಕೆ ಎಲ್ ರೈ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ,ಪಂಚಾಯತ್ ಸದಸ್ಯರಾದ ಚಂದ್ರಶೇಖರ ಪನ್ನೆ, ಮಣಿಕಂಠ, ಶ್ರೀಮತಿ ಗೌರಿ ನೆಟ್ಟಾರು, ಅಂಗನವಾಡಿ,ಆಶಾ ಕಾರ್ಯಕರ್ತೆಯರು,

ಆರೋಗ್ಯ ಇಲಾಖೆ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು,ಪಂಚಾಯತ್ ಕಾರ್ಯದರ್ಶಿ ತಿರುಮಲೇಶ್ವರ, ಲೆಕ್ಕ ಸಹಾಕರಾದ ಶ್ರಿಮತಿ ಸುಶೀಲ ಹಾಗು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.