ಪಂಜ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

0

ಪಂಜ ಗ್ರಾಮ ಪಂಚಾಯತ್ ನಲ್ಲಿ ಅ.2 ರಂದು ಗಾಂಧಿ ಜಯಂತಿ ಆಚರಣೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ, ಚಂದ್ರಶೇಖರ ದೇರಾಜೆ, ಜಗದೀಶ್ ಪುರಿಯ, ಶ್ರೀಮತಿ ಮಲ್ಲಿಕಾ, ಶ್ರೀಮತಿ ವೀಣಾ, ಶ್ರೀಮತಿ ನೇತ್ರಾವತಿ ಕಲ್ಲಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಬಾಬು,

ಶ್ರೀಮತಿ ಗೀತಾ, ತಾರನಾಥ, ಪ್ರದೀಪ್ ರಾಜ್ ಕೆ, ಶ್ರೀಮತಿ ಚಿತ್ರಕಲಾ, ಘನ ತ್ಯಾಜ್ಯ ಘಟಕದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸಿಬ್ಬಂದಿ ಬಾಬು ಸ್ವಾಗತಿಸಿ ,ವಂದಿಸಿದರು.