ಕನಕಮಜಲು ಗಾಂಧಿಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆ

0

ಕನಕಮಜಲು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಅಂಗವಾಗಿ ಒಡಿಎಫ್ ಪ್ಲಸ್ ಮೋಡೆಲ್ ಆಯ್ಕೆ ಮಾಡುವ ಕುರಿತು “ವಿಶೇಷ ಗ್ರಾಮ ಸಭೆಯು ಅ.2ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಗ್ರಾ ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ ವಹಿಸಿದ್ದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜ.ಬಿ ಇವರು ಒಡಿಎಫ್. ಪ್ಲಸ್ ಮೋಡೆಲ್ ಗ್ರಾಮ ಎಂಬ ಘೋಷಣೆಯನ್ನು ನಡೆಸಿಕೊಟ್ಟರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಗ್ರಾಮಗಳನ್ನು ಒ.ಡಿ.ಎಫ್. ಪ್ಲಸ್ ಗ್ರಾಮ ಎಂದು ಘೋಷಣೆ ಮಾಡಲಾಗುತ್ತಿದ್ದು ಇದರಲ್ಲಿ ಕನಕಮಜಲು ಗ್ರಾಮ ಪಂಚಾಯಿತ್ ಕೂಡ ಆಯ್ಕೆಯಾಗಿರುತ್ತದೆ.
ಈ ಸಂದರ್ಭದಲ್ಲಿ ಗ್ರಾ ಪಂ ನ ಉಪಾಧ್ಯಕ್ಷ ರವಿಚಂದ್ರ ಕಾಪಿಲ, ಸದಸ್ಯರುಗಳಾದ ಶ್ರೀಧರ ಕುತ್ಯಾಳ, ಶ್ರೀಮತಿ ದೇವಕಿ ಕುದ್ಕುಳಿ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಸುಮಿತ್ರ ಕುತ್ಯಾಳ, ಇಬ್ರಾಹಿಂ ಕಾಸಿಂ ಕನಕಮಜಲು, ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ. ಪಂ. ಸಿಬ್ಬಂದಿಗಳು ಸಹಕರಿಸಿದರು.