ಐವರ್ನಾಡು ಗ್ರಾಮ ಪಂಚಾಯತ್ ಬೃಹತ್ ಸ್ವಚ್ಛತಾ ಶ್ರಮದಾನ

0

ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ

ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಯುವಶಕ್ತಿ ಸಂಘ ಐವರ್ನಾಡಿನ ಸಹಯೋಗದೊಂದಿಗೆ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವು ಅ.02 ರಂದು ನಡೆಯಿತು.

ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ನರ್ಸರಿ ಕಾಲೋನಿವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದ ನಂತರ ಪೂ. ಗಂಟೆ 9.00 ರಿಂದ ಗ್ರಾಮ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಯ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಗ್ರಾಮ ಸಭೆಯ ಉದ್ಘಾಟನೆ ಯ ನಂತರ ಮಹಾತ್ಮಾ ಗಾಂಧೀಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗಾಂಧೀಜಿಯವರಿಗೆ ಗ್ರಾಮ ಸಭೆಗೆ ಸೇರಿದ ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿಗಳು ಗೌರವ ವಂದನೆ ಸಲ್ಲಿಸಿದರು.

ಈ ಗ್ರಾಮ ಸಭೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, NRLM ಒಕ್ಕೂಟದ ಅಧ್ಯಕ್ಷರು, MBK, ಸದಸ್ಯರು, ಗ್ರಂಥಪಾಲಕಿ,ಅರೋಗ್ಯ ಕಾರ್ಯಕರ್ತೆಯರು,ಹಾಗೂ ಪಂಚಾಯತ್ ಸಿಬ್ಬಂದಿಗಳು, ಯುವಶಕ್ತಿ ಸಂಘ ದ ಸದಸ್ಯರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.