ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಸಮಾವೇಶ ಉದ್ಘಾಟನೆ

0

ಡಾ.ಹೆಗ್ಗಡೆ, ಮೋಹನದಾಸ ಸ್ವಾಮೀಜಿ ಸಹಿತ ಹಲವು ಗಣ್ಯರ ಉಪಸ್ಥಿತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಸುಳ್ಯದ ಅಮರಶ್ರೀಭಾಗ್ ನ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.

ಸಮಾವೇಶದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.
ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಸಮಾವೇಶ ಉದ್ಘಾಟಿಸಿದರು.
ಬಳಿಕ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಮಾಣಿಲ ಶ್ರೀಧಾಮ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿ, ಸುಳ್ಯ ಸೈಂಟ್ ಬ್ರಿಜಿಡ್ಸ್ ನ ಧರ್ಮಗುರು ರೆ.ಫಾ.ವಿಕ್ಟರ್ ಡಿಸೋಜಾ, ಬೆಂಗಳೂರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಶಂಕರಪ್ಪ, ನೆಹರು ಆರ್ಟ್ಸ್, ಸೈನ್ಸ್ ಕಾಮರ್ಸ್ ಕಾಲೇಜು ಹುಬ್ಬಳ್ಳಿ ಇಲ್ಲಿ ನಿವೃತ್ತ ಪ್ರಾಂಶುಪಾಲ ಪೊ.ಯೂಸುಫ್ ಪೈಚಾರ್, ಸುಳ್ಯ‌ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ್, ಮುಂಬೈ ಉದ್ಯಮಿ ಆರ್.ಬಿ. ಹೆಬ್ಬಳ್ಳಿ, ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ಸಹಿತ ಹಲವು ಗಣ್ಯರು ವೇದಿಕೆಯಲ್ಲಿ ಇದ್ದರು.

ಧರ್ಮಸ್ಥಳ ಎಸ್.ಕೆ.ಡಿ.ಆರ್. ಡಿ.ಪಿ.ಬಿ.ಸಿ. ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಹೆಚ್. ಮಂಜುನಾಥ್ ಆಶಯ ಭಾಷಣ ಮಾಡಿದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಸ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.