ಜಾಲ್ಸೂರು: ಗಾಂಧಿಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆ

0

ಗಾಂಧಿಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆ ಮತ್ತು ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆಯು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಅ.2ರಂದು ನಡೆಯಿತು.
ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಕೆ.ಎಂ. ಬಾಬು ಕದಿಕಡ್ಕ, ಶ್ರೀಮತಿ ಲೀಲಾವತಿ ವಿನೋಬನಗರ, ಪಿ.ಆರ್. ಸಂದೀಪ್ ಕದಿಕಡ್ಕ, ಶಿವಪ್ರಸಾದ್ ನೀರಬಸಿರು, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು ಉಪಸ್ಥಿತರಿದ್ದರು.
ವಿಶೇಷ ಗ್ರಾಮಸಭೆಯಲ್ಲಿ ಗ್ರಾಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸಿಬ್ಬಂದಿಗಳು ಸಹಕರಿಸಿದರು.