ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಅಕ್ಷರದ ಅವ್ವ ಭಾರತ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ವಿಶೇಷ ಚಲನಚಿತ್ರ ಪ್ರದರ್ಶನ

0

ಬೆಳಗಾವಿಯ ನಾಡಿನ ಸಮಾಚಾರ ದಿನ ಪತ್ರಿಕೆಯ ಸಂಪಾದಕ ಬಸವರಾಜ ಯಲ್ಲಪ್ಪ ಉಪ್ಪಾರಟ್ಟಿ ಉಪಸ್ಥಿತಿ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಗಳು, ಕನಕಮಜಲು ಯುವಕ ಮಂಡಲ , ನಾಡಿನ ಸಮಾಚಾರ ಸೇವಾ ಸಂಘ ( ರಿ.) ಗೋಕಾಕ್, ನಾಡಿನ ಸಮಾಚಾರ ದಿನಪತ್ರಿಕೆ, ಅಮೋಘಸಿದ್ಧೇಶ್ವರ ಕ್ರಿಯೇಷನ್ಸ್ ಯಾದವಾಡ ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅಕ್ಷರದ ಅವ್ವ ಭಾರತ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ “ಸಾವಿತ್ರಿಬಾಯಿ ಫುಲೆ” ವಿಶೇಷ ಚಲನಚಿತ್ರ ಪ್ರದರ್ಶನವು ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಅ.7ರಂದು ಜರುಗಿತು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಹಾಗೂ ನಾಡಿನ ಸಮಾಚಾರ ದಿನ ಪತ್ರಿಕೆಯ ಸಂಪಾದಕ ಬಸವರಾಜ ಯಲ್ಲಪ್ಪ ಉಪ್ಪಾರಟ್ಟಿ, ನಾಡಿನ ಸಮಾಚಾರ ದಿನಪತ್ರಿಕೆಯ ಬೆಳಗಾವಿ ಜಿಲ್ಲಾ ವರದಿಗಾರ ಯಮನಪ್ಪ ಹೆಚ್‌. ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಸೌಮ್ಯ ಕದಿಕಡ್ಕ, ಶಿಶುಮಂದಿರದ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಕನಕಮಜಲು ಯುವಕ ಮಂಡಲದ ಅಧ್ಯಕ್ಷ ರಕ್ಷಿತ್ ಅಕ್ಕಿಮಲೆ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್, ವಿದ್ಯಾಸಂಸ್ಥೆಯ ಸಹಶಿಕ್ಷಕವೃಂದದವರು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.