ಮರ್ಕಂಜ ಗ್ರಾ.ಪಂ.ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ: ಅ.10ರಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ

0

ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ಮರ್ಕಂಜ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ ಪ್ರಶಸ್ತಿ ಗೆ ಆಯ್ಕೆಯಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ಮರ್ಕಂಜ ಗ್ರಾ.ಪಂ.ಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕೋಟತಟ್ಟುವಿನ ಡಾ.ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಕಾರಂತೋತ್ಸವ ನಡೆಯಲಿದ್ದು, ಪ್ರಶಸ್ತಿಯನ್ನು ಕರ್ನಾಟಕ ರಾಜ್ಯಪಾಲರಾದ ಧಾವರ್ ಚಂದ್ ಗೆಹ್ಲೋತ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಿಳಿದು ಬಂದಿದೆ.