ಕೊಲ್ಲಮೊಗ್ರ : ಗ್ರಾ.ಪಂ. ಸದಸ್ಯತ್ವಕ್ಕೆ ಉದಯ ಕೊಪ್ಪಡ್ಕ ರಾಜೀನಾಮೆ

0

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸದಸ್ಯತ್ವಕ್ಕೆ ಉದಯ ಕೊಪ್ಪಡ್ಕ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಆ.24 ರಂದು ಪಂಚಾಯತ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಸ್ವ ಇಚ್ಚೆ ಯಿಂದ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಇದೀಗ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಉದಯ ಕೊಪ್ಪಡ್ಕರ ರಾಜೀನಾಮೆ ಅಂಗೀಕಾರಗೊಂಡಿದ್ದು, ಸುಳ್ಯ ತಾ.ಪಂ. ಕಚೇರಿಗೆ ಮುಂದಿನ ಕ್ರಮಕ್ಕಾಗಿ ವರದಿ ಮಾಡಲಾಗಿದೆ ಎಂದು ತಿಳಿದುಬಂದಿದೆ.