ಬೈಕಿನ ಚಕ್ರಕ್ಕೆ ಸೀರೆ ಸೆರಗು ಸುತ್ತಿ ರಸ್ತೆಗೆ ಬಿದ್ದ ಮಹಿಳೆಯ ಕಾಲಿಗೆ ಗಂಭೀರ ಗಾಯ

0

ಸೋಣಂಗೇರಿ ಬಳಿ ಸಂಭವಿಸಿದ ಅಪಘಾತ

ಬೈಕಿನಲ್ಲಿ ಹಿಂಬದಿ ಕುಳಿತು ಬರುತ್ತಿದ್ದ ಮಹಿಳೆಯ ಸೀರೆಯ ಬೈಕಿನ ಚಕ್ರಕ್ಕೆ ಸುತ್ತಿಕೊಂಡ ಪರಿಣಾಮವಾಗಿ ಬಿದ್ದು, ಕಾಲಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಕೌಡಿಚ್ಚಾರಿನ ಶಾಂಭವಿ ಎಂಬವರು ಬೈಕಿನಲ್ಲಿ ಹಿಂಬದಿ ಕುಳಿತು ಸುಳ್ಯಕ್ಕೆ ಬರುತ್ತಿದ್ದ ವೇಳೆ ಅವರ ಸೀರೆಯ ಸೆರಗು ಬೈಕಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮವಾಗಿ ಅಪಘಾತ ಸಂಭವಿಸಿದ್ದು, ರಸ್ತೆಗೆ ಬಿದ್ದ ಮಹಿಳೆ ಕಾಲಿಗೆ ಗಂಭೀರ ಗಾಯಗಳಾಯಿತು. ಮಹಿಳೆಯನ್ನು ಸ್ಥಳೀಯರು ಆ ದಾರಿಯಲ್ಲಿ ಬಂದ ಜೀಪೊಂದರಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

.

.