ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಮಿಂಚಲಿದೆ ಕೆದಂಬಾಡಿ ರಾಮಯ್ಯ ಗೌಡರ ಸ್ತಬ್ಧಚಿತ್ರ

0

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ ಅ. 24 ರಂದು ನಡೆಯಲಿದ್ದು, ಇದರಲ್ಲಿ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಸಹಯೋಗದಲ್ಲಿ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಳುನಾಡ ಕೆಚ್ಚೆದೆಯ ವೀರ ಸ್ವಾತಂತ್ರ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ತಬ್ದ ಚಿತ್ರವೂ ಸ್ಥಾನ ಪಡೆಯಲಿದೆ.

ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ ಹಾಗೂ ಅವರ ಹೆಸರನ್ನು ಜನ ಮಾನಸದಲ್ಲಿ ಮೂಡಿಸುವ ವಿಶೇಷ ಪ್ರಯತ್ನವಾಗಿ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಗುವುದು,
ಎಲ್ಲಾ ಸಮಾಜ ಬಾಂಧವರು ಭಾಗವಹಿಸಬೇಕೆಂದು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.