ಪೆರುವಾಜೆ ಡಾ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ಸಂಘದ ಉದ್ಘಾಟನೆ

0

ಪೆರುವಾಜೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023- 24ನೇ ಸಾಲಿನ ಸ್ನಾತಕೋತ್ತರ ವಾಣಿಜ್ಯ ಸಂಘದ ಉದ್ಘಾಟನೆಯು ಅ.25ರಂದು ನಡೆಯಿತು.

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕುಶಾಲಪ್ಪ ಕೆ. ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ “ವಾಣಿಜ್ಯ ಹಾಗೂ ನಿರ್ವಹಣೆಯಲ್ಲಿ ಸಂಶೋಧನೆಯ ವಿಧಾನ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಬಳಿಕ ಮಾತನಾಡಿದ ಅವರು ಸಂಶೋಧನೆ, ಸಂಶೋಧನಾ ಪ್ರಕ್ರಿಯೆ , ಸಂಶೋಧನೆಯ ಮಹತ್ವ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಎದುರಿಸಬೇಕಾದ ಸವಾಲುಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು .


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿದ್ದರು.
ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಶ್ರೀಮತಿ ಪ್ರತಿಮಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ಸಂಯೋಜಕರಾದ ಶ್ರೀಮತಿ ಜ್ಯೋತಿ ಎಸ್ ಉಪಸ್ಥಿತರಿದ್ದರು . ವಾಣಿಜ್ಯ ಸಂಘದ ವಿದ್ಯಾರ್ಥಿ ಕಾರ್ಯದರ್ಶಿಯಾದ ಕುಮಾರಿ ಪವಿತ್ರ.ಎಸ್. ಸ್ವಾಗತಿಸಿ , ವಾಣಿಜ್ಯ ಸಂಘದ ವಿದ್ಯಾರ್ಥಿ ಮುಖಂಡ ನಿಶ್ಮಿತ್ ರೈ ವಂದಿಸಿದರು. ದ್ವಿತೀಯ ಎಂ.ಕಾಂ. ವಿದ್ಯಾರ್ಥಿನಿ ಕು. ಆತ್ಮಿಕ ಕಾರ್ಯಕ್ರಮವನ್ನು ನಿರೂಪಿಸಿದರು.