ಸಂಪಾಜೆ ಗ್ರಾ.ಪಂ.ಗೆ ಅಭಿವೃದ್ಧಿ ಕಾಮಗಾರಿಗಳಿಗೆ ಹತ್ತು ಕೋಟಿ ವಿಶೇಷ ಅನುದಾನಕ್ಕಾಗಿ ಗ್ರಾ.ಪಂ. ನಿಯೋಗದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿ. ಭೇಟಿ

0

ಕೆ.ಪಿ.ಸಿ.ಸಿ. ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಟಿ. ಎಂ ಶಹೀದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಆಡಳಿತದ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಗ್ರಾ.ಪಂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹತ್ತು ಕೋಟಿ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಉಪಮುಖ್ಯಮಂತ್ರಿಗಳು ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರೆಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ ಸಂಪಾಜೆ, ಶ್ರೀಮತಿ ಸುಂದರಿ ಮುಂಡಡ್ಕ, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್,ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ ಪಾರ್ವರ್ಡ್ ಗ್ರೂಪ್ ನ ಡಾ. ಉಮ್ಮರ್ ಬೀಜದಕಟ್ಟೆ, ಸಲೀಂ ಪೆರುಂಗೋಡಿ, ಹಾರಿಸ್ ಪಿ. ಎಂ, ಅಯ್ಯುಬ್ ಗೂನಡ್ಕ, ಮಂಜುನಾಥ್, ಉನೈಸ್ ಗೂನಡ್ಕ, ಹನೀಫ್ ಕಲ್ಲುಗುಂಡಿ, ಮೊದಲದವರು ಉಪಸ್ಥಿತರಿದ್ದರು.