ಕೆ.ಟಿ.ವಿಶ್ವನಾಥರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ , ಸಂಘಟಕ ಕೆ.ಟಿ.ವಿಶ್ವನಾಥರು ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.


ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್, ಎಸ್.ಪಿ.ರಿಶ್ಯಂತ್ , ಜಿ.ಪಂ. ಕಾರ್ಯದರ್ಶಿ ಡಾ. ಆನಂದ ಕೆ., ಮಂಗಳೂರು ಮೇಯರ್ ಆನಂದ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ಮೊದಲಾದವರು ಉಪಸ್ಥಿತರಿದ್ದರು.