ಕೊಡಿಯಾಲಬೈಲು ಎಂ. ಜಿ.ಎಂ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಸುಳ್ಯ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ರವರು ಸ್ವಾಗತ ಭಾಷಣ ಮಾಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಶಿಕ್ಷಕವೃಂದ ದವರಿಂದ ಹಾಗೂ ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳನ್ನು ಹಾಡುವಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಶಿಕ್ಷಕಿ ಶ್ರೀಮತಿ ಚಿತ್ರಲೇಖ ರವರು ವಂದನಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕವೃಂದ ಹಾಗೂ ಸಿಬ್ಬಂದಿವರ್ಗ ಮತ್ತು ಮಕ್ಕಳು ಪಾಲ್ಗೊಂಡಿದ್ದರು.