ದೇವರಕೊಲ್ಲಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಕಾರು ಢಿಕ್ಕಿ : ಜಖಂ

0

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಕೊಡಗು ಸಂಪಾಜೆ ಗ್ರಾಮದ ದೇವರಕೊಲ್ಲಿ ಎಂಬಲ್ಲಿ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದು ದೇವರಕೊಲ್ಲಿಯ ಜಾರ್ಜ್ ಎಂಬವರ ಹೊಟೇಲ್ ಮುಂಭಾಗದಲ್ಲಿ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಢಿಕ್ಕಿ ಹೊಡೆದಿದ್ದು, ಕಾರಿನ ಚಾಲಕ ಸೇರಿದಂತೆ ಪ್ರಯಾಣಿಕರರು ಅಪಾಯದಿಂದ ಪಾರಾಗಿದ್ದು, ಕಾರು ಹಾಗೂ ಬೈಕ್ ಗಳು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.