ಐವರ್ನಾಡುನಲ್ಲಿ ಸಾಹಿತ್ಯ ಸಂಭ್ರಮ

0


ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನೆನಪು

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಐವರ್ನಾಡು ಹಾಗೂ ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ಸಹಯೋಗದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಡಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನೆನಪು ಹಾಗೂ ಭಾವಗಾನ ಕಾರ್ಯಕ್ರಮವನ್ನು ಸರಕಾರಿ ಪದವಿಪೂರ್ವ ಕಾಲೇಜು ಐವರ್ನಾಡು ಇಲ್ಲಿ ನ.4 ರಂದು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ರೇಖಾ ಯು ಅಧ್ಯಕ್ಷರು ಶಾಲಾ ಅಭಿವೃದ್ಧಿ ಸಮಿತಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಕುತ್ಯಾಡಿ ಉಪಸ್ಥಿತರಿದ್ದರು.

ಶ್ರೀಮತಿ ಲೀಲಾ ದಾಮೋದರ್ ಅವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇವರ ನೆನಪು ಕಾರ್ಯಕ್ರಮದಲ್ಲಿ ಅವರ ಸಾಹಿತ್ಯದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು ಭಾವನಾ ಸುಗಮ ಸಂಗೀತ ಬಳಗದ ಸಂಚಾಲಕರಾದ ಕೆ ಆರ್ ಗೋಪಾಲಕೃಷ್ಣ ಇವರು ಭಾವಗಾನ ಕಾರ್ಯಕ್ರಮವನ್ನು ನಡೆಸಿ ಶುಶ್ರಾವ್ಯವಾಗಿ ಹಾಡಿದರು . ಸಭೆಯ ಅಧ್ಯಕ್ಷತೆಯನ್ನು ಕ ಸಾ ಪ ದ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ಇವರು ವಹಿಸಿದರು.

ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರಾದ ಸೂಫಿ ಪೆರಾಜೆ ಸ್ವಾಗತಿಸಿದರು. ತೇಜಸ್ವಿ ಕಡಪಳ ವಂದಿಸಿದರು . ಶ್ರೀಮತಿ ಚಂದ್ರಮತಿ ಕೆ ಇವರು ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಿಎ ಗಣೇಶ್ ಭಟ್ ,ಚಂದ್ರಾವತಿ ಬಡ್ಡಡ್ಕ ,ಕೇಶವ ಸಿ ಎ,,ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.