ಹಳೆಗೇಟು ಅಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ : ರಿಕ್ಷಾ ಚಾಲಕ ಮೃತ್ಯು

0

ಅಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.

ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಕರೆ ತರುತ್ತಿದ್ದ ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾಗೆ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸಹ ಪ್ರಯಾಣಿಕ ಗಣಪತಿ ಭಟ್ ಎಂಬವರು ಗಾಯಗೊಂಡಿದ್ದು, ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.