ರವಿಚಂದ್ರ ಕೊಡಿಯಾಲಬೈಲು ಬಿಜೆಪಿ ಸೇರ್ಪಡೆ

0


ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರವಿಚಂದ್ರ ಕೊಡಿಯಾಲಬೈಲುರವರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.


ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಬಿಜೆಪಿ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.