ನಿರ್ಮಾಣ ಹಂತದಲ್ಲಿರುವ ಮನೆಯೊಳಗೇ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0


ನಿರ್ಮಾಣಗೊಳ್ಳುತ್ತಿರುವ ಮನೆಯೊಳಗೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆ ಗ್ರಾಮದ ಪೆರುಂಗೋಡಿಯಲ್ಲಿ ವರದಿಯಾಗಿದೆ.


ಪೆರುಂಗೋಡಿಯ ನಾಗರಾಜ ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಾಗರಾಜರವರು ಹೊಸದಾಗಿ ಮನೆ ಕಟ್ಟುತ್ತಿದ್ದು, ಮನೆಯು ನಿರ್ಮಾಣ ಹಂತದಲ್ಲಿದೆ.ಇದೀಗ ಅದೇ ಮನೆಯೊಳಗೆ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಅವರಿಗೆ 37 ವರ್ಷ ವಯಸ್ಸಾಗಿತ್ತು. ಮೃತರು ಸಹೋದರಿಯನ್ನು, ಬಂಧುಗಳನ್ನು ಅಗಲಿದ್ದಾರೆ.