ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ನ.10 ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಸೂಫಿ ಪೆರಾಜೆ ದೈಹಿಕ ಶಿಕ್ಷಣ ಪರಿವೀಕ್ಷಕರು ಶಿಕ್ಷಣ ಇಲಾಖೆ ಸುಳ್ಯ ಇವರು ವಹಿಸಿಕೊಂಡರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಜಯರಾಮ, ಉಪಾಧ್ಯಕ್ಷರು, ಸದಸ್ಯರು, ನರೇಗಾ ಸಾಮಾಜಿಕ ಪರಿಶೋಧನ ಸಂಯೋಜಕರು ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಉದ್ಯೋಗ ಖಾತರಿ ಫಲಾನುಭವಿಗಳು, ಗ್ರಾಮಸ್ತರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.