ಕೊಯನಾಡು: ಕಾರು ಬೈಕ್ ಢಿಕ್ಕಿ – ಅಪಾಯದಿಂದ ಪಾರು

0

ಕಾರು ಮತ್ತು ಬೈಕ್ ಪರಸ್ಪರ ಢಿಕ್ಕಿ ಹೊಡೆದುಕೊಂಡು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ನ.12ರಂದು ಬೆಳಿಗ್ಗೆ ಸಂಭವಿಸಿದೆ.

ಕುಶಾಲನಗರ ಮೂಲದವರು ಮಂಗಳೂರಿಗೆ ತೆರಳುವ ವೇಳೆ ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬೈಕ್ ಕೊಯನಾಡಿನ ಅರಣ್ಯ ಇಲಾಖೆಯ ಬಳಿ ಮುಖ್ಯ ರಸ್ತೆಯಲ್ಲಿ ಪರಸ್ಪರ ಢಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.