ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯು ನ.13ರಂದು ಸಂಜೆ ನಡೆಯಿತು.

ದೇವಸ್ಥಾನದ ಅರ್ಚಕ ಶ್ರೀವರ ಭಟ್ ಅವರ ನೇತೃತ್ವದಲ್ಲಿ ಗೋಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.