ಕೆವಿಜಿ ಐಪಿಎಸ್ ನಲ್ಲಿ ಮಕ್ಕಳ ದಿನಾಚರಣೆ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನ.15 ರಂದು ಮಕ್ಕಳ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಯು.ಜೆ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ವಿದ್ಯಾರ್ಥಿಗಳ ಜೊತೆ ಸೇರಿ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಶಿಕ್ಷಕಿಯರು ಪ್ರಾರ್ಥನಾ ಗೀತೆಯನ್ನು ಹಾಡಿದರು. ಬಳಿಕ ಯು.ಕೆ.ಜಿ ವಿದ್ಯಾರ್ಥಿಗಳು ನೃತ್ಯ ಮಾಡಿದರು. ಪ್ರೀ.ಕೆ.ಜಿ ಯ ವಿದ್ಯಾರ್ಥಿ ಆರ್ಯಹಿ ‘ ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದನು. ಆ ನಂತರ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ವಿವಿಧ ನೃತ್ಯ ನಾಟಕ ಮತ್ತು ಮೂಕ ನಟನೆಗಳನ್ನು ಮಾಡುತ್ತ ವಿದ್ಯಾರ್ಥಿಗಳನ್ನು ಮನರಂಜಿಸಿದರು. ಬಳಿಕ ಪ್ರೀ.ಕೆ.ಜಿ ಯಿಂದ 10ನೇ ತರಗತಿಯ ವರೆಗಿನ ಮಕ್ಕಳಿಗೆ ಕೆಲವು ಮನರಂಜನೆಯ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ನಿರೂಪಿಸಿದರು. ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.