ಮದುವೆಗದ್ದೆ ಐಶ್ವರ್ಯ ಆತ್ಮಹತ್ಯೆ ಪ್ರಕರಣ : ಪೋಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ನ್ಯಾಯಾಂಗ ಕಸ್ಟಡಿಗೆ

0

ಮದುವೆಗದ್ದೆ ಸುಬ್ರಹ್ಮಣ್ಯ ಗೌಡರ ಪುತ್ರಿ ಐಶ್ವರ್ಯರವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸ್ ಕಸ್ಟಡಿಯಲ್ಲಿದ್ದ ಐಶ್ವರ್ಯ ಗಂಡ, ಮಾವ ಹಾಗೂ ಮನೆಯವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದಾಗಿ ತಿಳಿದುಬಂದಿದೆ.

ಐಶ್ವರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಆಕೆಯ ಗಂಡ ರಾಜೇಶ್, ಮಾವ ಕಾಪಿಲ ಗಿರಿಯಪ್ಪ ಗೌಡ, ಅತ್ತೆ ಸೀತಾ, ಮೈದುನ ವಿಜಯ್, ಓರಗಿತ್ತಿ ತಸ್ಮಯ್ ಇದುವರೆಗೆ ಪೋಲೀಸ್ ಕಸ್ಟಡಿಯಲ್ಲಿದ್ದರು. ನಿನ್ನೆ ಅವರನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತೆಂದು ತಿಳಿದುಬಂದಿದೆ.