ಕೊಡಗು ಸಂಪಾಜೆ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ‌.ಸಿ. ಟ್ರಸ್ಟ್ ಮಡಿಕೇರಿ, ಕೊಡಗು ಸಂಪಾಜೆ ವಲಯದ ಸಂಪಾಜೆ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಸಮಾರಂಭವು ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನ.17ರಂದು ಜರುಗಿತು.

ಕಾರ್ಯಕ್ರಮವನ್ನು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತ್ ಎನ್.ಸಿ. ಅವರು ಉದ್ಘಾಟಿಸಿ, ಶುಭಹಾರೈಸಿದರು‌.
ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ನಿರ್ದೇಶಕ ಪುರುಷೋತ್ತಮ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯಕುಮಾರ್ ಚೆದ್ಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿ ಜಗದೀಶ್ ಸ್ವಾಗತಿಸಿ, ತಿರುಮಲೇಶ್ವರಿ ಬಾಳೆಕಜೆ ವಂದಿಸಿದರು.