ಸುಬ್ರಹ್ಮಣ್ಯ: ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ, ಗರ್ಭಗುಡಿಯ ಪೋಟೋ ತೆಗೆದ ಆರೋಪ, ಪೊಲೀಸ್ ದೂರು

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ
ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ಕುಲ್ಕುಂದದ ಶ್ರೀನಾಥ್ ಭಟ್ ಎಂಬವರ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ.

ಈ ಬಗ್ಗೆ ದೂರು ನೀಡಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದಾರೆ. ದೂರಿನಲ್ಲಿ ಶ್ರೀನಾಥ್ ಭಟ್ ಎಂಬವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇದವಿದ್ದರೂ ಗರ್ಭ ಗುಡಿಯ ಪೋಟೋ ತೆಗೆಯಲಾಗಿದೆ.

ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಲ್ಲದೆ ಅರ್ಚಕರು, ಪುರೋಹಿತರ ನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂಧನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವದೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.