ಜಯನಗರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

0

ಜಯನಗರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಇಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುದ್ದಪ್ಪ, ಉಪಾಧ್ಯಕ್ಷೆ ನಳಿನಿ,ಸ್ಥಳೀಯ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ, ಶಾಲಾ ಮುಖ್ಯ ಶಿಕ್ಷಕಿ ವೀಣಾ, ಹಾಗೂ ಎಸ್ ಡಿ ಎಮ್ ಸಿ ಸದಸ್ಯರುಗಳು, ಶಿಕ್ಷಕಿಯರಾದ ಅಶ್ವಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ, ಪದ್ಯ ಹಾಡುವುದು, ಪುಟಾಣಿ ಮಕ್ಕಳ ಆಕರ್ಷಕ ಹುಲಿ ಕುಣಿತ,ಮೈಮ್ ಕಾರ್ಯಕ್ರಮ ನಡೆಯಿತು.
ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಐಸ್ ಕ್ರೀಮ್ ಹಂಚಿಕೆ ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ವೀಣಾ ಸ್ವಾಗತಿಸಿ, ಶಿಕ್ಷಕಿಯರಾದ ನಳಿನಾಕ್ಷಿ, ಭಾರತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.