ನಾಳೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೀಕೃತ ಸುಬ್ರಾಯ ಶ್ರೀ ಸಭಾಭವನದ ಉದ್ಘಾಟನೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೀಕೃತಗೊಂಡಿರುವ ಶ್ರೀ ಸುಬ್ರಾಯ ಸಭಾಭವನವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ನ.18ರಂದು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ.