ಸುಳ್ಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ದ.ಕ. ಸಂಸದ ಹಾಗೂ ಸುಳ್ಯ ಶಾಸಕರಿಂದ ವೀಕ್ಷಣೆ

0

ಸುಳ್ಯದಲ್ಲಿ ನಡೆಯುತ್ತಿರುವ ಮೂರು ದಿನದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಎರಡನೆಯ ದಿನದ ಇಂದು ಮಂಗಳೂರು ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ವೀಕ್ಷಿಸಿದರು.

ಮುಖಂಡರುಗಳಾದ ಹರೀಶ್ ಕಂಜಿಪಿಲಿ, ಶುಭೋದ್ ಶೆಟ್ಟಿ ಮೇನಾಲ, ಎನ್ ಎ ರಾಮಚಂದ್ರ, ಚನಿಯ ಕಲ್ತಡ್ಕ ಸೇರಿದಂತೆ ಮುಖಂಡರುಗಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಆಯೋಜನೆ ಹಾಗೂ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ
ನ.17,18,19 ರಂದು ಮೂರು ದಿನಗಳು ಬಹಳ ಅದ್ದೂರಿಯ ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದು 16 ತಂಡಗಳ ಭಾಗವಹಿಸುವಿಕೆಯಲ್ಲಿ ನಡೆಯಲಿದೆ.

ಪುರುಷರ ಮತ್ತು ಮಹಿಳೆಯರ ರಾಷ್ಟ್ರ ಮಟ್ಟದ ತಂಡಗಳು ಪಂದ್ಯಾಟದಲ್ಲಿ ಸೆಣಸಾಟ ನಡೆಸಲಿರುವುದು.