ಸುಳ್ಯದಲ್ಲಿ  ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ಎರಡನೆಯ ದಿನದಲ್ಲಿ ಬ್ಯಾಂಕ್ ಆಫ್ ಬರೋಡ ಭರ್ಜರಿ ಜಯ

0

ಸುಳ್ಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಎರಡನೆಯ ದಿನದ ಕಬ್ಬಡಿ ಪಂದ್ಯಾಟದ ಪ್ರಥಮ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ತಂಡವು ಪಾಂಡಿಚೆರಿಯ ವೇಲಾಲಗರ್ ತಂಡವನ್ನು 32- 6 ಅಂಕಗಳ ಅಂತರದಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿತು.
ಬ್ಯಾಂಕ್ ಆಫ್ ಬರೋಡ ತಂಡದಲ್ಲಿ ಪ್ರೊ ಕಬಡ್ಡಿ ಆಟಗಾರರಾದ ಸುಖೇಶ್ ಹೆಗ್ಡೆ, ರತನ್, ರೋಹಿತ್ ಮರ್ಲ, ಸುನಿಲ್ ಹನುಮಂತಪ್ಪ, ಸಚಿನ್ ಸುವರ್ಣ, ಸುಳ್ಯ ಮೂಲದ ಆಟಗಾರ ದಿವಿಶ್ ಸೇರಿದಂತೆ ಬಲಿಷ್ಠ ಆಟಗಾರರು ತಂಡದಲ್ಲಿದ್ದರು.

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ, ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬ್ಬಡ್ಡಿ ಪಂದ್ಯಾಟ ಸಂಘಟನಾ ಸಮಿತಿ, ಆಶ್ರಯದಲ್ಲಿ ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ಕಬಡ್ಡಿ ಪಂದ್ಯಾಟ ಸುಳ್ಯದ ಪ್ರಭು ಮೈದಾನದಲ್ಲಿ ನಡೆಯುತ್ತಿದೆ.