ತಂಟೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಕಳಂಜ ಗ್ರಾಮದ ತಂಟೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿಶಾಲಾಕ್ಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಲಾಖಾ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್, ಕಳಂಜ ಗ್ರಾ.ಪಂ. ಸದಸ್ಯ ಪ್ರಶಾಂತ್ ಕುಮಾರ್ ಕಿಲಂಗೋಡಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ ಕೆ.ಸಿ, ಕಳಂಜ ಗ್ರಾಮ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಶಿಲ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಪುಟಾಣಿಗಳಿಗೆ ಮತ್ತು ಪೋಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಪೋಷಕರು ಕೇಂದ್ರಕ್ಕೆ ಚಪ್ಪಲಿ ಸ್ಟಾಂಡನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕರ್ತೆ ಶ್ರೀಮತಿ ಯಶೋಧ ಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ವಾರಿಜ ಮತ್ತು ಅಕ್ಷರದಾಸೋಹ ಕಾರ್ಯಕರ್ತೆ ಶ್ರೀಮತಿ ರಾಧಾಲಕ್ಷ್ಮಿ ಸಹಕರಿಸಿದರು.