ಅಮೈ ಮಡಿಯಾರು ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಅಮೈ ಮಡಿಯಾರು ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಸೂಂತೋಡು, ಸದಸ್ಯರಾದ ಹರೀಶ್ ರೈ ಉಬರಡ್ಕ, ಚೊಕ್ಕಾಡಿ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಜಿಲ್ಲಾ ಮಹಿಳಾ ಯುವ ಸಂಚಾಲಕಿ ಶ್ರೀಮತಿ ವೀಣಾ, ಯುವ ಸಂಚಾಲಕ ಉಮೇಶ್ ಹೂಗ್ಲಿ, ಸತ್ಯಸಾಯಿ ಸೇವಾ ಸಂಸ್ಥೆ ಯ ಶ್ರೀಮತಿ ಧನ್ಯಶ್ರೀ ,ಮುಖ್ಯ ಶಿಕ್ಷಕಿ ಶ್ರೀಮತಿ ರಾಮಕ್ಕ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಶೋಭಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಮಂಜುಳಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವತಿಯಿಂದ ಮತ್ತು ಚೊಕ್ಕಾಡಿ ಸತ್ಯಸಾಯಿ ಸೇವಾಸಂಸ್ಥೆಯ ವತಿಯಿಂದ ನಡೆಸಿದ ಸ್ಪರ್ಧೆಗಳ ಬಹುಮಾನಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ರಾಮಕ್ಕ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ವಂದಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಲಿಖಿತ ಸಹಕರಿ ಸಿದರು. ಸಹ ಶಿಕ್ಷಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಸತ್ಯಸಾಯಿ ಸೇವಾ ಸಂಸ್ಥೆಯ, ಶಾಲೆಯ ಮತ್ತು ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಎಸ್.ಡಿ.ಎಂ.ಸಿ ಸದಸ್ಯ ರು, ಪೋಷಕರು, ವಿದ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.