ಮರ್ಕಂಜ : ಮಿನುಂಗೂರು ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಮನವಿ ಪತ್ರ ಬಿಡುಗಡೆ

0

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಗೊಳ್ಳಲಿದ್ದು ಆ ಪ್ರಯುಕ್ತ ಮನವಿ ಪತ್ರ ಬಿಡುಗಡೆಯು ಇಂದು ಕ್ಷೇತ್ರದಲ್ಲಿ ಕ್ಷೇತ್ರದ ತಂತ್ರಿಗಳಾದ ದೇಲಂಪಾಡಿ ಪದ್ಮನಾಭ ತಂತ್ರಿಗಳು ಬಿಡುಗಡೆಗೊಳಿಸಿದರು. ಗೋವಿಂದ ಅಳವುಪಾರೆ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಭಜನಾ ಸಂಘದ ಅಧ್ಯಕ್ಷ ಮಹೇಶ್ ಪುರ, ಸೇವಾ ಸಮಿತಿ ಅಧ್ಯಕ್ಷ ಕಮಾಲಕ್ಷ‌ ಗೌಡ ಪುರ, ಅನ್ನಪೂರ್ಣ ಸಮಿತಿಯ ಅಧ್ಯಕ್ಷ ದಯಾನಂದ ಪುರ ಹಾಗೂ ವಿವಿಧ ಸಮಿತಿಯ ಸದಸ್ಯರು, ಕ್ಷೇತ್ರದ ಭಕ್ತಾಧಿಗಳು ಉಪಸ್ಥಿತರಿದ್ದರು.