ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಪ್ರಬಂಧ ಸ್ಪರ್ಧೆಯಲ್ಲಿ ಕು.ದಿಶಾ ಆಲೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಕಾವಳಪಡೂರು ಇದರ ಸಹಯೋಗದಲ್ಲಿ ವಗ್ಗದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಪ್ರಬಂಧ ಸ್ಪರ್ಧೆಯಲ್ಲಿ ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ದಿಶಾ ಆಲೆಟ್ಟಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ವಸಂತ ಆಲೆಟ್ಟಿ ಯವರ ಪುತ್ರಿ.